January21, 2026
Wednesday, January 21, 2026
spot_img

ಇಸ್ಲಾಮಾಬಾದ್‌ನಲ್ಲಿ ಭಾರೀ ಸ್ಫೋಟ: 12 ಮಂದಿ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಇಂದು ಬೆಳಿಗ್ಗೆ ನಡೆದ ಭಾರೀ ಸ್ಫೋಟದಿಂದ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಇಸ್ಲಾಮಾಬಾದ್‌ನ ಜಿ-11 ಪ್ರದೇಶದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ದ್ವಾರದ ಬಳಿ ಸ್ಫೋಟ ಸಂಭವಿಸಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ ಮತ್ತು 21 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಸ್ಫೋಟದ ಶಬ್ದವು ಆರು ಕಿಲೋಮೀಟರ್ ದೂರದವರೆಗೂ ಕೇಳಿಬಂದಿತ್ತು. ಘಟನೆಯ ಬಳಿಕ ಪೊಲೀಸ್ ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದ್ದು, ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿದೆ. ಅಧಿಕಾರಿಗಳು ಸ್ಫೋಟದ ಮೂಲ ಮತ್ತು ಉದ್ದೇಶವನ್ನು ಪತ್ತೆಹಚ್ಚಲು ತನಿಖೆ ಪ್ರಾರಂಭಿಸಿದ್ದಾರೆ.

ದೆಹಲಿಯಲ್ಲಿ ನಿನ್ನೆ ನಡೆದ ಕಾರ್ ಬ್ಲಾಸ್ಟ್‌ನ ನಂತರ ಇಸ್ಲಾಮಾಬಾದ್‌ನಲ್ಲಿ ನಡೆದಿರುವ ಈ ಸ್ಫೋಟ ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Must Read