ಖಾಸಗಿ ಕಂಪನಿಯಲ್ಲಿ ಭಾರೀ ಸ್ಫೋಟ: ಕನಿಷ್ಟ 9 ಮಂದಿ ಸಾವು, ಹಲವರು ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ನಾಗ್ಪುರದಲ್ಲಿನ ಕಂಪನಿಯೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ ಕನಿಷ್ಠ ಒಂಭತ್ತು ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.
ಇಲ್ಲಿನ ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್ ಹೆಸರಿನ ಕಂಪನಿಯಲ್ಲಿ ಭಾನುವಾರ 9.30ರ ಸುಮಾರಿಗೆ ಈ ಘಟನೆ ನಡೆದಿದೆ.
ಇಲ್ಲಿ ಕಲ್ಲಿದ್ದಲು ಸ್ಫೋಟಗೊಳಿಸಲು ಸ್ಫೋಟಕಗಳನ್ನು ಸಿದ್ಧಪಡಿಸುತ್ತಿದ್ದ ವೇಲೆ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಗಳಲ್ಲಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!