April 10, 2026
Friday, April 10, 2026
spot_img

ತೆಲಂಗಾಣದ ಲ್ಯಾಬ್​​​ನಲ್ಲಿ ಭೀಕರ ಸ್ಫೋಟ: ಆರು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕಸ್ಮಿಕ ಸ್ಫೋಟದಿಂದ ಖಾಸಗಿ ಪ್ರಯೋಗಾಲಯವೊಂದು ಬೆಂಕಿಗೆ ಆಹುತಿಯಾದ ಘಟನೆ ತೆಲಂಗಾಣ ರಾಜ್ಯದ ಯದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ನಡೆದಿದೆ. ಹೈದರಾಬಾದ್ ಸಮೀಪದ ದೋಟಿಗುಡೆಮ್ ಪ್ರದೇಶದಲ್ಲಿರುವ ಘಟಕದಲ್ಲಿ ರೇಡಿಯೇಟರ್ ಸ್ಫೋಟಗೊಂಡು ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದು, ಸುತ್ತಮುತ್ತ ದಟ್ಟ ಹೊಗೆ ಆವರಿಸಿ ಆತಂಕ ಸೃಷ್ಟಿಸಿತು.

ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸುಮಾರು 10 ವಾಹನಗಳ ನೆರವಿನಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸ್ಫೋಟದ ವೇಳೆ ಪ್ರಯೋಗಾಲಯದೊಳಗೆ 11 ಮಂದಿ ಇದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಸೇರಿ ಆರು ಮಂದಿ ಗಾಯಗೊಂಡಿದ್ದು, ಅವರಿಗೆ ತಕ್ಷಣ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:

ಸ್ಫೋಟದ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಚೌಟುಪ್ಪಲ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಈ ಅವಘಡದಿಂದ ಕಂಪನಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !