ಪೊಲೀಸ್ ಠಾಣೆಯಲ್ಲೇ ಭಾರೀ ಸ್ಫೋಟ, ಜೀವ ರಕ್ಷಕರಾದ 12 ಪೊಲೀಸರು ಸಾವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಸ್ವಾಟ್ ಪ್ರಾಂತ್ಯದ ಪೊಲೀಸ್ ಠಾಣೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 12 ಮಂದಿ ಪೊಲೀಸರು ಮೃತಪಟ್ಟಿದ್ದಾರೆ.

ಭಯೋತ್ಪಾದನಾ ನಿಗ್ರಹ ಇಲಾಖೆ ಠಾಣೆಯಲ್ಲಿ ನಿನ್ನೆ ರಾತ್ರಿ ಸ್ಫೋಟ ಸಂಭವಿಸಿದ್ದು, 40  ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಠಾಣೆಯೊಳಗೆ ಒಟ್ಟಾರೆ ಎರಡು ಸ್ಫೋಟ ಸಂಭವಿಸಿದ್ದು, ಇಡೀ ಕಟ್ಟಡವೇ ಕುಸಿದು ಬಿದ್ದಿದೆ.

ಇದು ಆತ್ಮಾಹುತಿ ದಾಳಿ ಅಲ್ಲ, ಠಾಣೆಯಲ್ಲಿ ಮದ್ದುಗುಂಡು ಹಾಗೂ ಮಾರ್ಟರ್ ಶೆಲ್‌ಗಳನ್ನು ಇಡುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ, ಹೊರಗಿನಿಂದ ಯಾವುದೇ ದಾಳಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸ್ಫೋಟಕ್ಕೆ ನಿಖರ ಕಾರಣವೇನು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ, ಇದು ಹಳೆಯ ಕಟ್ಟಡವಾಗಿದ್ದು, ಸಾಕಷ್ಟು ಸಿಬ್ಬಂದಿಗಳು ಹೊಸ ಕಚೇರಿಯಲ್ಲಿದ್ದಾರೆ ಎನ್ನಲಾಗಿದೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!