ಮಣಿಪುರ ವಿವಿ ಕ್ಯಾಂಪಸ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು, ಇನ್ನೋರ್ವ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರ ಇಂಫಾಲ್‌ನ ವಿಶ್ವವಿದ್ಯಾನಿಲಯದ ಆವರಣದಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿ, ಮತ್ತೊರ್ವ ಗಂಭೀರ ಗಾಯಗೊಂಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಈ ಸ್ಪೋಟವು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ನಡೆಸಲಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಯಾವುದೇ ಉಗ್ರ ಸಂಘಟನೆಗಳು ಇದುವರೆಗೆ ಈ ಕೃತ್ಯದ ಹೊಣೆ ಹೊತ್ತುಕೊಂಡಿಲ್ಲ.

ಸ್ಫೋಟದ ತೀವ್ರತೆಗೆ 24 ವರ್ಷದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಇನ್ನೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ರಕ್ಷಣಾ ಪಡೆಗಳು ದೌಡಾಯಿಸಿದ್ದು, ಮಾಹಿತಿ ಕಲೆಹಾಕಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here