ಕೇರಳದ ಪಾಲಕ್ಕಾಡ್‌ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿದೆ. ಪಾಲಕ್ಕಾಡ್‌ ಜಿಲ್ಲೆಯ ಒಂಗಲ್ಲೂರ್ ಪಟ್ಟಣದ ನಿವಾಸಿಗಳು ಈ ಪ್ರದೇಶದಲ್ಲಿ ಕ್ವಾರಿಯೊಂದರ ಬಳಿ ಸ್ಫೋಟಕಗಳ ದೊಡ್ಡ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ. ಬುಧವಾರದಂದು ಘಟನೆ ಬೆಳಕಿಗೆ ಬಂದಿದೆ.
ಪ್ರತಿ ಬಾಕ್ಸ್‌ನಲ್ಲಿ 200 ಸ್ಟಿಕ್‌ಗಳಂತೆ 40 ಬಾಕ್ಸ್‌ಗಳಲ್ಲಿ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಅಕ್ಕಪಕ್ಕದ ನಿವಾಸಿಗಳು ಇದನ್ನು ಗಮನಿಸಿ ಶೋರನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಫೋಟಕಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!