November 5, 2026
Thursday, November 5, 2026
spot_img

ಮಾಸ್ತೇನಹಳ್ಳಿ ಗರುಡ ಮಾರ್ಟ್ ಇಂಡಸ್ಟ್ರೀಸ್‌ನಲ್ಲಿ ಭಾರೀ ಅಗ್ನಿ ಅವಘಡ : ಆಕಾಶದೆತ್ತರ ಕಪ್ಪು ಹೊಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಮಾಸ್ತೇನಹಳ್ಳಿ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಗರುಡ ಮಾರ್ಟ್‌ ಇಂಡಿಯಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಗೃಹೋಪಯೋಗಿ ಉಪಕರಣಗಳ ಜೋಡಣೆ ಘಟಕವಾದ ಗರುಡ ಮಾರ್ಟ್‌ ಇಂಡಿಯಾ ಕಾರ್ಖಾನೆಯೊಳಗೆ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಬೆಂಕಿ ಕ್ಷಿಪ್ರವಾಗಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ದಟ್ಟವಾದ ಕಪ್ಪು ಹೊಗೆ ಆಕಾಶದೆತ್ತರಕ್ಕೆ ಹರಡಿದೆ. ಟೆಲಿವಿಷನ್‌ಗಳು, ಫ್ರಿಜ್‌ಗಳು, ವಾಷಿಂಗ್ ಮೆಷಿನ್‌ಗಳು, ಫ್ಯಾನ್‌ಗಳು ಮತ್ತು ಏರ್ ಕೂಲರ್‌ಗಳು ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ಉಪಕರಣಗಳು ಹಾಗೂ ಭಾರೀ ಉತ್ಪಾದನಾ ಯಂತ್ರೋಪಕರಣಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ.

ಬೆಂಕಿಯನ್ನು ನಿಯಂತ್ರಿಸಲು ಮತ್ತು ಪಕ್ಕದ ಕೈಗಾರಿಕಾ ಘಟಕಗಳಿಗೆ ಹರಡುವುದನ್ನು ತಡೆಯಲು ಚಿಂತಾಮಣಿ, ಶಿಡ್ಲಘಟ್ಟ ಮತ್ತು ಚಿಕ್ಕಬಳ್ಳಾಪುರದಿಂದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಿಬ್ಬಂದಿ ಹಲವು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

Must Read