ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಗ್ರಾಮಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಟಾಕಿ ದಾಸ್ತಾನಿಗೆ ಬೆಂಕಿ ಹತ್ತಿದ ಘಟನೆ ನಡೆದಿದೆ.
ಹಾವೇರಿ ನಗರ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು.ಇದೀಗ ಏಕಾಎಕಿ ಅದಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಈ ವೇಳೆ ಪಟಾಕಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನಾಪತ್ತೆಯಾಗಿದ್ದರು. ಇದೀಗ ಮೂವರ ಮೃತದೇಹ ಸಿಕ್ಕಿದೆ. ದ್ಯಾಮಪ್ಪ ಓಲೇಕಾರ, ರಮೇಶ ಬಾರ್ಕಿ, ಶಿವಲಿಂಗ ಅಕ್ಕಿ ಸೇರಿ ಮೂವರ ಮೃತದೇಹ ಪತ್ತೆಯಾಗಿದೆ.
ನಂತರ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಎಂಟು ಆಗ್ನಿಶಾಮಕ ವಾನಗಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.