October 10, 2026
Saturday, October 10, 2026
spot_img

ಧಗಧಗನೆ ಹೊತ್ತಿ ಉರಿದ ಬೆಳಗಾವಿಯ ಪ್ಲಾಸ್ಟಿಕ್‌ ಫ್ಯಾಕ್ಟರಿ, ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗಾವಿಯ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್‌ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಡಾಂಗೆ ಪ್ಲಾಸ್ಟಿಕ್‌ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಯಂತ್ರೋಪಕರಣಗಳು ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ.

ತಡರಾತ್ರಿಯಲ್ಲಿ ಅಗ್ನಿ ಆರಂಭವಾಗಿದೆ. ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ಲಾಸ್ಟಿಕ್‌ ವಸ್ತುಗಳು ಧಗಧಗನೆ ಉರಿದು ಇಡೀ ಕಾರ್ಖಾನೆಯೇ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.

ಸರಿಯಾದ ಸಮಯಕ್ಕೆ ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆ ಯಾವುದೇ ಪ್ರಾಣಾಪಾಯ ಆಗಿಲ್ಲ. ಮಧ್ಯರಾತ್ರಿ ಬೆಂಕಿ ಬಿದ್ದ ಕಾರಣ ಫ್ಯಾಕ್ಟರಿಯಲ್ಲಿ ಯಾರೂ ಜನರಿರಲಿಲ್ಲ.

Must Read