ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ರೆಸ್ಟೋರೆಂಟ್ವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 22 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಲಿಯಾನಿಂಗ್ ಪ್ರಾಂತ್ಯದ ಲಿಯಾಯಾಂಗ್ನ ಬೈಟಾ ಜಿಲ್ಲೆಯ ಚುನಿಯಾಂಗ್ ರೆಸ್ಟೋರೆಂಟ್ನಲ್ಲಿ ಅಗ್ನಿ ದುರಂತ ಸಂಭವಿಸಿದೆ.
ಘಟನೆಗೆ ಸಂಬಂಧಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ (Social Media) ಹರಿದಾಡುತ್ತಿದೆ. ಅಗ್ನಿ ವ್ಯಾಪಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿದ್ದ ಜನರು ಕಾಲ್ಕಿತ್ತಿದ್ದಾರೆ.
ಸದ್ಯ ಪ್ರಾಥಮಿಕ ಮೂಲಗಳ ಪ್ರಕಾರ ಮೊದಲು ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ರೆಸ್ಟೋರೆಂಟ್ಗೆ ವ್ಯಾಪಿಸಿದೆ. ಈ ಕುರಿತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ.