Thursday, June 1, 2023

Latest Posts

ಆಕಾಶದ ಎತ್ತರಕ್ಕೆ ಚಿಮ್ಮಿದ ಬೆಂಕಿಯ ಜ್ವಾಲೆ: 25ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯ ಟಿಕ್ರಿ ಕಲಾನ್ ಪ್ರದೇಶದಲ್ಲಿನ ಪಿವಿಸಿ ಮಾರುಕಟ್ಟೆಯಲ್ಲಿರುವ ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಜ್ವಾಲೆ ಮುಗಿಲು ಮುಟ್ಟಿದೆ. ಶನಿವಾರ ಗೋಡೌನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸದ್ಯಕ್ಕೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. 25 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸುತ್ತಿವೆ. ಹಲವಾರು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸುವ ಮೂಲಕ ಗೋಡೌನ್‌ನಲ್ಲಿ ಪ್ರಾಣಹಾನಿ ಮತ್ತು ಆಸ್ತಿ ಹಾನಿಯನ್ನು ತಪ್ಪಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!