ಅಂಗಡಿಗೆ ಬೆಂಕಿ: ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಕೊಪ್ಪಳ ನಗರದ ಗಂಜ್ ಸರ್ಕಲ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಶಫಿಕ್ ಸಿದ್ದಿಕಿ ಎಂಬುವವರಿಗೆ ಸೇರಿದ ಆಟೋ ಮೊಬೈಲ್ ಹಾಗೂ ಹನುಮಂತಪ್ಪ ಎಂಬುವವರ ಹೋಟೆಲ್‌ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಈ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!