ಪುಲ್ವಾಮಾದ ಮಸೀದಿಯಲ್ಲಿ ಭಾರೀ ಅಗ್ನಿ ದುರಂತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿನ ತ್ರಾಲ್​ ಪ್ರದೇಶದಲ್ಲಿರುವ ಮಸೀದಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ಈ ಅವಘಡಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ, ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ತಿಳಿದ ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಟೆಂಡರ್‌ಗಳು ಬೆಂಕಿಯನ್ನು ಹತೋಟಿಗೆ ತರಲು ಕಾರ್ಯಾಚರಣೆ ನಡೆಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯು ವಿದ್ಯುತ್ ಸರ್ಕ್ಯೂಟ್‌ನಲ್ಲಿನ ಶಾರ್ಟ್‌ನಿಂದಾಗಿ ಸಂಭವಿಸಿರಬಹುದು ಎಂದು ಸೂಚಿಸುತ್ತದೆ. ಈ ಬಗ್ಗೆ ಪೊಲೀಸರು ಸ್ಪಷ್ಟಪಡಿಸಿಲ್ಲ. ಅಲ್ಲದೆ ಈ ಘಟನೆಯಲ್ಲಿ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!