ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಐದು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿರುವ ಘಟನೆ ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ತಡರಾತ್ರಿ ನಡೆದಿದೆ.
ಈ ಅಗ್ನಿ ಅವಘಡದಲ್ಲಿ ಕಟ್ಟಡದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಗುತಿಯಾಗಿದೆ ಎಂದು ತಿಳಿದುಬಂದಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಟ್ಟಡದಲ್ಲಿ ಸಿಲುಕಿದ್ದ ಮೂವರು ಭದ್ರತಾ ಸಿಬ್ಬಂದಿಯನ್ನು ರಕ್ಷಿಸಿದ್ದು, ಬೆಂಕಿ ನಂದಿಸಿದ್ದಾರೆ.
ಕಟ್ಟಡದಲ್ಲಿದ್ದ ಫರ್ನಿಚರ್ ಅಂಗಡಿ, ಕೋಚಿಂಗ್ ಸೆಂಟರ್, ಐಟಿ ಕಂಪನಿ ಸಂಪೂರ್ಣ ಸುಟ್ಟು ಕರಕಲಾಗಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.