ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಬಟ್ಟೆ, ಶೂ ಮಳಿಗೆಯಲ್ಲಿ ಕಾಣಿಸಿಕೊಂಡ ಬೆಂಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿರುವುದರಿಂದ ಸಾರ್ವಜನಿಕರ ನಿದ್ದೆಗೆಡಿಸಿದೆ. ಇದೀಗ ಬಟ್ಟೆ ಹಾಗೂ ಶೂ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬೆಂಗಳೂರು ನಗರದ ಚಿಕ್ಕಜಾಲದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ರಾತ್ರಿ 10 ಗಂಟೆ ಸುಮಾರಿಗೆ ಶೂ ಮತ್ತು ಬಟ್ಟೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಮಳಿಗೆ ಹೊತ್ತಿ ಉರಿದಿದೆ. ಈ ಅವಘಡದಿಂದಾಗಿ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿವೆ.

ವಿಷಯ ತಿಳಿದ ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ವಿದ್ಯುತ್​​​​ ಶಾರ್ಟ್ ಸರ್ಕ್ಯೂಟ್​​​​​ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!