Saturday, December 9, 2023

Latest Posts

ಗೋಡೌನ್‌ಗೆ ಬೆಂಕಿ: ಸ್ಥಳಕ್ಕೆ 21 ಅಗ್ನಿಶಾಮಕ ವಾಹನಗಳು ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರ ರಾಜಧಾನಿ ನವದೆಹಲಿಯ ಹನುಮಾನ್ ಮಂದಿರದ ಹಿಂಭಾಗದಲ್ಲಿರುವ ಕಮ್ರುದಿನ್ ನಗರದಲ್ಲಿರುವ ಗೋಡೌನ್‌ನಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 21ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ.

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಾಚಿದ್ದು, ದಟ್ಟ ಹೊಗೆ ಆವರಿಸಿದೆ. ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆಯಲ್ಲಿ ಇದುವರೆಗೆ ಯಾವುದೇ ಸಾವು ನೋವಿನ ಪ್ರಕರಣ ವರದಿಯಾಗಿಲ್ಲ. ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!