Tuesday, March 28, 2023

Latest Posts

ಡಂಪಿಂಗ್‌ ಯಾರ್ಡ್‌ನಲ್ಲಿ ಬೆಂಕಿ ರುದ್ರ ನರ್ತನ: ಮುಗಿಲೆತ್ತರಕ್ಕೆ ಚಿಮ್ಮಿದ ಜ್ವಾಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬೈನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನವಿ ಮುಂಬೈನ ಟರ್ಬೆ ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವ್ಯಾಪಕವಾಗಿ ಹರಡಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಮತ್ತೊಂದೆಡೆ, ಬೆಂಕಿ ವ್ಯಾಪಿಸುತ್ತಿರುವುದರಿಂದ ಡಂಪಿಂಗ್ ಯಾರ್ಡ್ ಸುತ್ತಮುತ್ತ ವಾಸಿಸುವ ಜನರು ಭಯಭೀತರಾಗಿದ್ದಾರೆ. ಡಂಪಿಂಗ್‌ ಯಾರ್ಡ್‌ನಿಂದ ಭಾರೀ ಹೊಗೆ ಆಚೆ ಬರುತ್ತಿದ್ದು, ಸ್ಥಳೀಯ ನಿವಾಸಿಗಳ ಉಸಿರಾಟಕ್ಕೆ ತೊಂದರೆಯುಂಟಾಗುತ್ತಿದೆ. ಬೆಂಕಿ ನಂದಿಸಿದರೂ ಸಹ ಒಳಗಿರುವ ದಟ್ಟ ಹೊಗೆ ಎಲ್ಲೆಡೆ ಸುತ್ತುವರಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!