September 28, 2026
Monday, September 28, 2026
spot_img

ನೋಯ್ಡಾದ ವಸತಿಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ, ಒಳಗೆ ಎಷ್ಟು ಮಂದಿ ಸಿಲುಕಿದ್ದಾರೆ ಗೊತ್ತಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಪ್ರದೇಶದ ನೋಯ್ಡಾದಲ್ಲಿ ಬೃಹತ್‌ ವಸತಿ ಕಟ್ಟಡಕ್ಕೆ ಬೆಂಕಿ ಬಿದ್ದಿದ್ದು, ಆರು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕೆಲಸ ನಡೆಯುತ್ತಿದೆ.

ನೋಯ್ಡಾದ ಸೆಕ್ಟರ್ 119 ರಲ್ಲಿರುವ ಅರಣ್ಯ ಸೊಸೈಟಿಯಲ್ಲಿ ಇರುವ ಕಟ್ಟಡದ ಕಟ್ಟಡದ 21ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಸಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರಬಹದು ಎಂದು ಶಂಕಿಸಲಾಗಿದೆ. ಸುಮಾರು 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಕಟ್ಟಡದಲ್ಲಿ ಎಷ್ಟು ಮಂದಿ ಸಿಲುಕಿದ್ದಾರೆ, ಅವಘಡಕ್ಕೆ ಕಾರಣವೇನು ಎನ್ನುವ ಬಗ್ಗೆ ಮಾಹಿತಿ ದೊರಕಿಲ್ಲ. ಆದರೆ ಪ್ರಾಥಮಿಕ ವರದಿಗಳ ಪ್ರಕಾರ ಬೆಂಕಿಗೆ ಎಸಿ ಸ್ಫೋಟ ಕಾರಣ ಎನ್ನಲಾಗಿದೆ. ಅಗ್ನಿ ಅವಘಡದ ಬಗ್ಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತುರ್ತು ನಿರ್ದೇಶನ ನೀಡಿದ್ದಾರೆ.

Must Read