ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದ್ದು, 10ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ಇಂದು ನಡೆದಿದೆ.
ವೀರಭದ್ರ ನಗರದಲ್ಲಿ ಈ ಘಟನೆ ನಡೆದಿದೆ. ಪಾರ್ಕಿಂಗ್ ಜಾಗದಲ್ಲಿ ಸಾಲಾಗಿ ನಿಂತಿದ್ದ ಎರಡು ಖಾಸಗಿ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದಲ್ಲಿದ್ದ ಬಸ್ಗಳಿಗೂ ಬೆಂಕಿ ತಗುಲಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ಬಸ್ಗಳು ಬೆಂಕಿಗಾಹುತಿಯಾಗಿವೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.