Tuesday, March 21, 2023

Latest Posts

ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಭಾರೀ ಬೆಂಕಿ ಅವಘಡ !

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಬೆಂಗಳೂರಿನ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಕೈಕೊಂಡ್ರಹಳ್ಳಿ ಕೆರೆ ಬಳಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ಘಟನೆಯ ವೀಡಿಯೋ ಟ್ವಿಟ್ಟರ್‌ ನಲ್ಲಿ ಹರಿದಾಡುತ್ತಿದ್ದು, ಜನನಿಬಿಡ ಸರ್ಜಾಪುರ ಮುಖ್ಯರಸ್ತೆಯಲ್ಲಿರುವ ಎರಡು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿರುವುದನ್ನು ದೃಶ್ಯಗಳು ತೋರಿಸುತ್ತವೆ. ಕಟ್ಟಡದಿಂದ ದಟ್ಟವಾದ ಹೊಗೆ ಆವರಿಸುತ್ತಿರುವುದು ಕಂಡು ಬರುತ್ತದೆ. ರಸ್ತೆಯ ಎರಡೂ ಬದಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.

ಪೊಲೀಸರ ಪ್ರಕಾರ ಬೆಂಕಿ ಅನಾಹುತಕ್ಕೆ ಕಾರಣವೇನು ಎಂದು ಇನ್ನೂ ತಿಳಿದುಬಂದಿಲ್ಲ. ಆದರೆ ಇಲ್ಲಿಯವರೆಗೆ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!