ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾರ್ಮಿನಾರ್ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ. ಕಿಶನ್ ರೆಡ್ಡಿ ಮತ್ತು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಗುಲ್ಜಾರ್ ಹೌಸ್ ಭೇಟಿ ನೀಡಿದ್ದಾರೆ. ಆ ಪ್ರದೇಶದ ಮಾಜಿ ಶಾಸಕ ಮತ್ತು ಎಐಎಂಐಎಂ ನಾಯಕಿ ಮುಮ್ತಾಜ್ ಅಹ್ಮದ್ ಖಾನ್ ಕೂಡ ಸ್ಥಳದಲ್ಲಿದ್ದರು.
ತೆಲಂಗಾಣದ ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.