September 30, 2026
Wednesday, September 30, 2026
spot_img

ದೆಹಲಿಯ ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ: ಒಂಬತ್ತು ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿನ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, 8 ಮಂದಿ ಮೃತಪಟ್ಟಿದ್ದಾರೆ.

ಇಂದು ಮುಂಜಾನೆ ಏಳು ಗಂಟೆಗೆ ಅಗ್ನಿ ಅವಘಡದ ಬಗ್ಗೆ ಅಗ್ನಿಶಾಮಕದಳಕ್ಕೆ ಕರೆ ಬಂದಿದೆ. ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡದ ಒಳಗೆ ಇನ್ನೂ ಹಲವರು ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..

Must Read