ಐದು ಅಂತಸ್ತಿನ ಹೋಟೆಲ್ ನಲ್ಲಿ ಭಾರಿ ಬೆಂಕಿ, ನಾಲ್ವರ ಸಾವು: ಕಿಟಕಿಯಿಂದ ಹಾರಿದ ಗೆಸ್ಟ್ ಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜಸ್ಥಾನದ ಅಜ್ಮೀರ್‌ನ ಡಿಗ್ಗಿ ಬಜಾರ್ ಪ್ರದೇಶದ ಹೋಟೆಲ್‌ವೊಂದರಲ್ಲಿ ಗುರುವಾರ ಬೆಳಂಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಾವನ್ನಪ್ಪಿದ್ದಾರೆ.

ಐದು ಅಂತಸ್ತಿನ ಹೋಟೆಲ್‌ನಲ್ಲಿ ತಂಗಿದ್ದ ಕೆಲವು ಅತಿಥಿಗಳು ಕಿಟಕಿಗಳಿಂದ ಹಾರಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿಗ್ಗಿ ಬಜಾರ್ ಪ್ರದೇಶದ ಹೋಟೆಲ್ ವೊಂದರಲ್ಲಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಪೊಲೀಸ್ ತಂಡ ಸ್ಥಳದಲ್ಲಿದೆ. ಇದಕ್ಕಿದಂತೆ ಸಂಭವಿಸಿ ಬೆಂಕಿ ಅನಾಹುತದಲ್ಲಿ ಇಬ್ಬರು ಪುರುಷರು, ಒಬ್ಬ ಮಹಿಳೆ ಮತ್ತು ಮಗು ಸೇರಿದಂತೆ ನಾಲ್ವರು ಉಸಿರುಗಟ್ಟುವಿಕೆ ಮತ್ತು ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ.

ಹೋಟೆಲ್‌ಗೆ ಕಿರಿದಾದ ಮಾರ್ಗವು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೆಚ್ಚುವರಿ ಎಸ್ಪಿ ಹಿಮಾಂಶು ಜಂಗಿದ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here