Friday, March 24, 2023

Latest Posts

ಮುಂಬೈನ ಪೀಠೋಪಕರಣಗಳ ಗೋದಾಮಿನಲ್ಲಿ ಭಾರೀ ಅಗ್ನಿ ದುರಂತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಂಬೈನ ಜೋಗೇಶ್ವರಿ ಪ್ರದೇಶದಲ್ಲಿರುವ ಪೀಠೋಪಕರಣಗಳ ಗೋಡೌನ್‌ನಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದ ಸ್ಥಳಕ್ಕೆ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.

ರಾಮಮಂದಿರದ ಬಳಿ ಸೋಮವಾರ ಬೆಳಗ್ಗೆ 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!