ಸಾಲ್ಟ್ ಲೇಕ್ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ: 12ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೊಲ್ಕತ್ತಾದ ಸಾಲ್ಟ್ ಲೇಕ್ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಉಂಟಾಗಿದೆ.  ಘಟನೆಯಲ್ಲಿ ಕನಿಷ್ಠ 4-5 ಅಂಗಡಿಗಳು ಸಂಪೂರ್ಣವಾಗಿ ನಾಶವಾಗಿದ್ದು, ಡಜನ್‌ಗಟ್ಟಲೆ ಅಂಗಡಿಗಳು ಹಾನಿಗೊಳಗಾಗಿವೆ ಎಂದು ಹೇಳಲಾಗಿದೆ. ಬೆಂಕಿ ಅವಘಡದಲ್ಲಿ ಅಂಗಡಿಯವರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬಿಧಾನನಗರ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂಭತ್ತು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿವೆ. ಅಗ್ನಿಶಾಮಕ ಸಚಿವ ಸುಜಿತ್ ಬೋಸ್ ಮತ್ತು ಬಿಧಾನನಗರ ಪೊಲೀಸ್ ಆಯುಕ್ತರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಎಫ್‌ಡಿ ಬ್ಲಾಕ್ ಮಾರುಕಟ್ಟೆಯಲ್ಲಿ ಗ್ಯಾಸ್ ಸಿಲಿಂಡರ್ ಒಡೆದಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಅಂಗಡಿಗಳಷ್ಟೇ ನಾಶವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗುರುವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಸಾಲ್ಟ್ ಲೇಕ್‌ನ ಎಪಿಡಿ ಬ್ಲಾಕ್ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಇತರೆ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ.

ಬೀಸುತ್ತಿರುವ ಗಾಳಿಯ ದಿಕ್ಕು ಬೆಂಕಿ ಹೆಚ್ಚು ವೇಗವಾಗಿ ಹರಡಲು ನೆರವಾಯಿತು. ಗುರುವಾರ ಬೆಳ್ಳಂಬೆಳಗ್ಗೆ ಮಾರುಕಟ್ಟೆ ಬಹುತೇಕ ಖಾಲಿ ಇದ್ದ ಕಾರಣ ಪ್ರಾಣಹಾನಿ ಕಡಿಮೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!