ಮುಂಬೈನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: 135 ಜನರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬೈನ 24 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿದ್ದ 135 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಘೋಡಾಪ್ಡಿಯೊ ಪ್ರದೇಶದ ಎಂಎಚ್‌ಎಡಿಎ ಕಾಲೊನಿಯ ನ್ಯೂ ಹಿಂದ್ ಮಿಲ್ ಕಾಂಪೌಂಡ್‌ನಲ್ಲಿರುವ ಕಟ್ಟಡದ ಮೂರನೇ ಮಹಡಿಯಲ್ಲಿ ಮುಂಜಾನೆ 3.40ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಕಟ್ಟಡದಲ್ಲಿ 1 ರಿಂದ 24ನೇ ಮಹಡಿಯವರೆಗೆ ಬೆಂಕಿ ವ್ಯಾಪಿಸಿದೆ. ಹೀಗಾಗಿ ಕಟ್ಟಡದಿಂದ 135 ಜನರನ್ನು ರಕ್ಷಣೆ ಮಾಡಲಾಗಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳಗಳು, ಮೂರು ನೀರಿನ ಟ್ಯಾಂಕರ್‌ಗಳು ಹಾಗೂ ಇತರ ಅಗ್ನಿಶಾಮಕ ದಳದ ವಾಹನಗಳು ಧಾವಿಸಿ ಬೆಂಕಿಯನ್ನು ನಂದಿಸಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆಯ ಬಳಿಕವಷ್ಟೇ ಮಾಹಿತಿ ಹೊರಬೀಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!