ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆಯ ಬಳಿ ನಿಂತಿದ್ದ ಖಾಸಗೀ ಬಸ್ಸೊಂದರಲ್ಲಿ ಇದ್ದಕಿದ್ದಂತೆಯೇ ಬೆಂಕಿ ಹೊತ್ತಿ ಧಗಧಗನೆ ಉರಿದ ಘಟನೆ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿ ನಡೆದಿದೆ.
ತಾಂತ್ರಿಕ ದೋಷ ಹಿನ್ನೆಲೆ ಕಳೆದ ಮೂರು ದಿನಗಳಿಂದ ಆನಂದಪುರದ ಬಳಿ ಬಸ್ ನಿಂತಿದ್ದ ಜಾಗದಲ್ಲಿಯೇ ಇತ್ತು. ಆದರೆ ಇಂದು ಇದ್ದಕ್ಕಿದ್ದಂತೆಯೇ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದು ಹೋಗಿದೆ.
ಘಟನೆಯ ಬಗ್ಗೆ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.