ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 7 ಜನರ ಸಾವು, 12 ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಉಂಟಾಗಿದ್ದು, ಏಳು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಉನಾ ಜಿಲ್ಲೆಯಲ್ಲಿರುವ ತಹ್ಲಿವಾಲ್‌ ಕೈಗಾರಿಕಾ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಇದರ ಪರಿಣಾಮ 7 ಮಂದಿ ಮೃತಪಟ್ಟಿದ್ದು, 12 ಜನ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
2022 ರ ಜನವರಿಯಲ್ಲಿ ಶಿವಕಾಶಿಯ ಪುಡುಪುಟ್ಟಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡು ಐವರು ಸಾವನ್ನಪ್ಪಿದ್ದರು. ಕಳದ ಫೆಬ್ರವರಿಯಲ್ಲಿ ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿನ ಪಟಾಕಿ ಘಟಕದಲ್ಲಿ ಉಂಟಾದ ಸ್ಫೋಟದಿಂದ 20 ಕಾರ್ಮಿಕರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!