ಟಾರ್ಪಾಲಿನ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟಾರ್ಪಾಲಿನ್‌ ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಉನ್ನಾವೋದ ಸದರ್ ಕೊತ್ವಾಲಿಯ ಮಗರ್ವಾರಾ ಕೈಗಾರಿಕಾ ಪ್ರದೇಶದಲ್ಲಿರುವ ಟಾರ್ಪಾಲಿನ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳು ಆಗಿರುವ ಬಗ್ಗೆ ವರದಿಯಾಗಿಲ್ಲ. ಆದರೆ ಇಲ್ಲಿರುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿರಬಹುದು ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!