ಶ್ರೀಶೈಲಂ ದೇವಸ್ಥಾನದ ಬಳಿ‌ ಅಗ್ನಿ ಅವಘಡ: 15 ಅಂಗಡಿಗಳು ಅಗ್ನಿಗಾಹುತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಆಂಧ್ರಪ್ರದೇಶದ ಶ್ರೀಶೈಲಂನ ದೇವಸ್ಥಾನದ ಬಳಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟುಭಸ್ಮವಾಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಶ್ರೀಶೈಲದ ಲಲಿತಾಂಬಿಕಾ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡು ಅಂಗಡಿಗಳು ಸುಟ್ಟು ಕರಕಲಾಗಿವೆ. ಎಲ್ ಬ್ಲಾಕ್ ನ ಅಂಗಡಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಹೇಳಲಾಗಿದ್ದು, ಈ ಅವಘಡದಲ್ಲಿ 15 ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಈ ಘಟನೆಯಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು ನಾಶವಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!