ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತಡರಾತ್ರಿ ಮತ್ತಿಕೆರೆ ಬಳಿ ನಡೆದಿದೆ.
ಯಶವಂತಪುರ ಠಾಣಾ ವ್ಯಾಪ್ತಿಯ ಮತ್ತಿಕೆರೆ ಬಳಿ ರಾತ್ರಿ 1:30ರ ಸುಮಾರಿಗೆ ಕಟ್ಟಡದ ಬಳಿ ಖಾಲಿ ಜಾಗದಲ್ಲಿ ಶೇಖರಿಸಲಾಗಿದ್ದ ತ್ಯಾಜ್ಯ ವಸ್ತುಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗೆ ಬಸ್ ಗ್ಯಾರೇಜ್‌ನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 20ಕ್ಕೂ ಹೆಚ್ಚು ಬಸ್‌ಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿತ್ತು. ಅದರ ಬೆನ್ನಲ್ಲೇ ಇದೀಗ ಅಂತಹುದೇ ಮತ್ತೊಂದು ಅವಘಡ ಸಂಭವಿಸಿದೆ.