Tuesday, August 16, 2022

Latest Posts

ರೈಲು ಇಂಜಿನ್‌ನಲ್ಲಿ ದಿಢೀರ್ ಬೆಂಕಿ: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಮುಂಜಾನೆ ಡಿಎಂಯು ರೈಲು ಇಂಜಿನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತುಕೊಂಡ ಘಟನೆ ಬಿಹಾರದ ಭೆಲ್ವಾ ರೈಲು ನಿಲ್ದಾಣದಲ್ಲಿ ನಡೆದಿದೆ. ನೋಡನೋಡುತ್ತಿದ್ದಂತೆ ಬೆಂಕಿ ಜ್ವಾಲೆ ತೀವ್ರವಾಗಿದ್ದು, ಇಂಜಿನ್‌ ಪೂರ್ತಿ ಸುಟ್ಟು ಕರಕಲಾಗಿದೆ. ಅದೃಷವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ರೈಲ್ವೆ ಇಲಾಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರೈಲು ರಕ್ಸಾಲ್‌ನಿಂದ ನರ್ಕಟಿಯಾಗಂಜ್‌ಗೆ ಹೋಗುತ್ತಿತ್ತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಎಂಜಿನ್‌ನಿಂದ ಇತರೆ ಭೋಗಿಗಳಿಗೆ ಬೆಂಕಿ ಹರಡಲಿಲ್ಲ. ಸ್ಥಳದಲ್ಲಿ ಅಗ್ನಿಶಾಮಕ ಕಾರ್ಯಾಚರಣೆಗಳು ನಡೆಯುತ್ತಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss