ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಧಾರವಿ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಬಗ್ಗೆ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಮಾಹಿತಿ ನೀಡಿದ್ದು, ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿಕಾಣಿಸಿಕೊಂಡಿದೆ. ಒಟ್ಟಾರೆ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದೆ.
ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಕಟ್ಟಡದಲ್ಲಿ ಬೆಂಕಿ ಕಂಡ ತಕ್ಷಣ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಬಿಎಂಸಿ ಪ್ರಕಾರ ನೆಲ ಮಹಡಿಯಲ್ಲಿದ್ದ ಮರದ ವಸ್ತು, ಪೀಠೋಪಕರಣಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.