ಚೀನಾದ ಶಾಪಿಂಗ್ ಮಾಲ್‌ನಲ್ಲಿ ಭಾರೀ ಅಗ್ನಿ ದುರಂತ: 16 ಮಂದಿ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೈಋತ್ಯ ಚೀನಾದ ಜಿಗಾಂಗ್ ನಗರದಲ್ಲಿ ಬುಧವಾರ ಸಂಜೆ ಸಂಭವಿಸಿದ ಭಾರೀ ಬೆಂಕಿ ದುರಂತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ಬುಧವಾರ ಸಂಜೆ 6 ಗಂಟೆಯ ನಂತರ 14 ಅಂತಸ್ತಿನ ವಾಣಿಜ್ಯ ಕಟ್ಟಡಕ್ಕೆ ತಕ್ಷಣ ಸ್ಪಂದಿಸಿದರು ಮತ್ತು 75 ಜನರನ್ನು ಸ್ಥಳಾಂತರಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ ದಟ್ಟವಾದ ಕಪ್ಪು ಹೊಗೆ ಆಕಾಶಕ್ಕೆ ಏರುತ್ತಿರುವುದನ್ನು ವೀಡಿಯೊಗಳು ತೋರಿಸಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಡೋನ್‌ಗಳನ್ನು ಬಳಸಿದ್ದಾರೆ.

ಕಟ್ಟಡ ನಿರ್ಮಾಣ ಕಾಮಗಾರಿಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬೆಂಕಿಯ ನಿರ್ದಿಷ್ಟ ಕಾರಣವನ್ನು ಕಂಡುಹಿಡಿಯಲು ಪ್ರಸ್ತುತ ಹೆಚ್ಚಿನ ತನಿಖೆ ನಡೆಯುತ್ತಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!