ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ನೋಯ್ಡಾದ ಇಕೋಟೆಕ್ ಪೊಲೀಸ್ ಠಾಣೆ ಪ್ರದೇಶದ ಕೂಲರ್ ಉತ್ಪಾದನಾ ಘಟಕದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯಲ್ಲಿ ಮೂರು ಕಾರ್ಖಾನೆಗಳು ಸುಟ್ಟು ಭಸ್ಮವಾಗಿದೆ. 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಬೆಂಕಿಗೆ ಕಾರಣ ಇನ್ನೂ ಹೇಳಲಾಗಿಲ್ಲ ಮತ್ತು ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.