ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್ನ ಜೆಸ್ಕಾಂ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು. ಕಚೇರಿ ಪೀಠೋಪಕರಣಗಳು ಮತ್ತು ವಸ್ತುಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿದೆ.
ಬೀದರ್ ನಗರದ ಜ್ಯೋತಿ ಕಾಲೋನಿಯಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ.
ಘಟನಾ ಸ್ಥಳಕ್ಕೆ ಮೂರು ಅಗ್ನಿಶಾಮಕ ದಳ ಮತ್ತು ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.