ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುತ್ತಿವೆ. ಬೆಂಕಿಯಿಂದಾಗಿ ಸುತ್ತ ದಟ್ಟ ಹೊಗೆ ಆವರಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ಇಲ್ಲಿಯೇ ಸಚಿವರು ಹಾಗೂ ಮುಖ್ಯಮಂತ್ರಿಗಳ ಕಚೇರಿ ಇದೆ, ಯಾವ ಕಾರಣದಿಂದಾಗಿ ಬೆಂಕಿ ಹೊತ್ತಿದೆ ಎಂದು ತಿಳಿದುಬಂದಿಲ್ಲ.