ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ನಡೆದಿದೆ.
ಸ್ಫೋಟದ ತೀವ್ರತೆಗೆ ಮನೇ ಕಟ್ಟಡವೇ ಕ್ಷಣಾರ್ಧದಲ್ಲಿ ಕುಸಿದು, ಅಕ್ಕಪಕ್ಕದ ಮನೆಗಳೂ ಬಿರುಕು ಬಿದ್ದಿದೆ. ಸ್ಫೋಟ ಸಮಯದಲ್ಲಿ ಮನೆಯೊಳಗಿದ್ದ ರಾಜ್ (38), ಸುರೇಶ್ (35), ದುರುಗಪ್ಪ (27), ಹುಸೇನಮ್ಮ (40), ನಾಗರಾಜ್ (18), ದುರುಗಮ್ಮ (17), ವಿಷ್ಣು (16), ಶ್ರೀಕಾಂತ್ (22) ಸೇರಿದಂತೆ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ತಕ್ಷಣ ಗಂಗಾವತಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ.
ಹೊಸ ಸಿಲಿಂಡರ್‌ನ್ನು ಹಾಕಿಸಿ ಆನ್ ಮಾಡುವಾಗ ಘಟನೆ ನಡೆದಿರುವುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಈ ಘಟನೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

