ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿಯ ಭರ್ಜರಿ ಬೇಟೆ: 12 ನಕ್ಸಲರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿಯು ಶುಕ್ರವಾರ (ಮೇ 10) ಭರ್ಜರಿ ಬೇಟೆಯಾಡಿದ್ದು, ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ (Bijapur District) 12 ಮಾವೋವಾದಿಗಳನ್ನು (Naxals Encounter) ಹೊಡೆದುರುಳಿಸಿದ್ದಾರೆ.

ನಕ್ಸಲರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ನಕ್ಸಲರು ಕೂಡ ಪ್ರತಿ ದಾಳಿ ನಡೆಸಿದ್ದು, ಇದೇ ವೇಳೆ ಭದ್ರತಾ ಸಿಬ್ಬಂದಿಯು 12 ನಕ್ಸಲರನ್ನು ಹತ್ಯೆಗೈದಿದ್ದಾರೆ.

ನಕ್ಸಲರ ನಿಗ್ರಹದ ಕಾರ್ಯಾಚರಣೆ ಕುರಿತು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣುದೇವ್‌ ಸಾಯಿ ಅವರು ಮಾಹಿತಿ ನೀಡಿದ್ದಾರೆ. ಬಿಜಾಪುರ ಜಿಲ್ಲೆಯ ಗಂಗಲೂರ್‌ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡು 12 ನಕ್ಸಲರನ್ನು ಹತ್ಯೆಗೈದಿದ್ದಾರೆ. ಇದುವರೆಗೆ ಎಲ್ಲ 12 ಶವಗಳು ಪತ್ತೆಯಾಗಿವೆ. ನಮ್ಮ ಭದ್ರತಾ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ, ಪೊಲೀಸರು ಕೈಗೊಂಡ ಜಂಟಿ ಕಾರ್ಯಾಚರಣೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!