ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪೂರ್ವ ಕಾಂಗೋದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವರು ಕಾಣೆಯಾಗಿದ್ದಾರೆ.
ಗೋಮಾದ ಮಸಿಸಿ ಪ್ರಾಂತ್ಯದ ಬೊಲೊವಾ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಲೆಫ್ಟಿನೆಂಟ್ ಕರ್ನಲ್ ಗುಯಿಲೌಮ್ ಎನ್ಡ್ಜಿಕೆ ಕೈಕೊ ಸೋಮವಾರ ತಿಳಿಸಿದ್ದಾರೆ.
ಭೂಕುಸಿತ ಸಂಭವಿಸಿದ ಸಂದರ್ಭದಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಣ್ಣು ಕುಸಿತ ಉಂಟಾಗಿರಬಹುದು ಎಂದು ಇಲ್ಲಿನ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.