ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡುತಾ ಪ್ರದೇಶದಲ್ಲಿ ಇಂದು ಪ್ರಯಾಣಿಕರ ಬಸ್ ಭೀಕರ ಭೂಕುಸಿತದಲ್ಲಿ ಸಿಲುಕಿದ್ದು,ಮೃತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಚಲಿಸುತ್ತಿದ್ದ ಬಸ್ ಭೂಕುಸಿತದಲ್ಲಿ ಸಿಲುಕಿಕೊಂಡಿದ್ದು, ಅವಶೇಷಗಳು ಮತ್ತು ಬಂಡೆಗಳು ನೇರವಾಗಿ ವಾಹನದ ಮೇಲೆ ಬಿದ್ದು ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದಾರೆ.
ಈಗಾಗಲೇ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಜನರಿದ್ದರು. ಆದರೆ ಈ ಹಂತದಲ್ಲಿ ನಿಖರವಾದ ಸಾವಿನ ಸಂಖ್ಯೆ ತಿಳಿದಿಲ್ಲ ಎಂದು ಬಿಲಾಸ್ಪುರ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಬಲ್ಲು ಸೇತುವೆಯ ಬಳಿ ಈ ಘಟನೆ ಸಂಭವಿಸಿದ್ದು, ಬೆಟ್ಟದ ಇಳಿಜಾರಿನಿಂದ ದೊಡ್ಡ ಪ್ರಮಾಣದ ಮಣ್ಣು ಮತ್ತು ಬಂಡೆಗಳು ಜಾರಿ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ ಅವಶೇಷಗಳ ಅಡಿಯಲ್ಲಿ ಹೂತುಹೋಗಿದೆ.ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ: ಮೃತರ ಸಂಖ್ಯೆ 18ಕ್ಕೆ ಏರಿಕೆ
