ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಸಿಕ್ಕಿಂನಲ್ಲಿ ನಿರಂತರ ಮಳೆಯಿಂದಾಗಿ ಮಿಲಿಟರಿ ಶಿಬಿರಗಳಿರುವ ಛಾತೆನ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಮೂವರು ಸೈನಿಕರು ಸಾವನ್ನಪ್ಪಿದ್ದಾರೆ.
ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 6 ಮಂದಿ ಸೈನಿಕರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸೈನಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಇದುವರೆಗಿನ ಕಾರ್ಯಾಚರಣೆಯಲ್ಲಿ ಮೃತಪಟ್ಟ ಸೈನಿಕರಾದ ಹವ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು ಪೋರ್ಟರ್ ಅಭಿಷೇಕ್ ಲಖಾಡ ಅವರ ಮೃತದೇಹಗಳು ಪತ್ತೆಯಾಗಿವೆ. ರಕ್ಷಿಸಲಾದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.