ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮುಂಜಾನೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಜನರು ಸಿಲುಕಿರುವ ಶಂಕೆ ಇದೆ ಎಂದು ವರದಿಯಾಗಿದೆ.
ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದ್ದು, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ತೆರಳುತ್ತಿದೆ.
ಕೆಎಸ್‌ಡಿಎಂಎ ಫೇಸ್‌ಬುಕ್ ಪೋಸ್ಟ್‌ನ ಪ್ರಕಾರ, ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳಲು ಸೂಚನೆ ನೀಡಲಾಗಿದೆ.
ಸಂತ್ರಸ್ತ ಪ್ರದೇಶಗಳ ಸ್ಥಳೀಯರು ಹೇಳುವಂತೆ ಹಲವರು ಸಿಕ್ಕಿಬಿದ್ದಿರುವ ಆತಂಕವಿದೆ. ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎನ್ನಲಾಗಿದೆ.