ಸಮ್ಮರ್ ಹಿಲ್ ಪ್ರದೇಶದಲ್ಲಿ ಭಾರೀ ಭೂಕುಸಿತ: ಸ್ನಿಫರ್ ಡಾಗ್ಸ್, ರಕ್ಷಣಾ ತಂಡ ಸ್ಥಳಕ್ಕೆ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಯಮಸ್ವರೂಪಿ ಮಳೆಯಿಂದಾಗಿ ಹಿಮಾಚಲಪ್ರದೇಶದಲ್ಲಿ ಎಲ್ಲೆಂದರಲ್ಲಿ ಭೂಕುಸಿತ ಘಟನೆಗಳು ಸಂಭವಿಸುತ್ತಿವೆ. ಇಂದು ಬೆಳ್ಳಂಬೆಳಗ್ಗೆ ಶಿಮ್ಲಾದ ಸಮ್ಮರ್ ಹಿಲ್ ಪ್ರದೇಶದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ವಿಷಯ ತಿಳಿದ ಕೂಡಲೇ ಸ್ನಿಫರ್‌ ಡಾಗ್ಸ್‌ ಜೊತೆಗೂಡಿ ರಕ್ಷಣಾ ತಂಡ ಸ್ಥಳಕ್ಕೆ ದೌಡಾಯಿಸಿವೆ.

ಮನೆಯ ಮೇಲೆ ಮಣ್ಣು ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ಶುರುವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ತಕ್ಷಣದ ವರದಿಗಳಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದಕ್ಕೂ ಮುನ್ನ, “ಮಂಗಳವಾರ ಶಿಮ್ಲಾದಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಗಳಿಗಾಗಿ ವೆಸ್ಟರ್ನ್ ಏರ್ ಕಮಾಂಡ್‌ನ ಚಿನೂಕ್ ಹೆಲಿಕಾಪ್ಟರ್ 18 ಭಾರತೀಯ ಸೇನಾ ಸಿಬ್ಬಂದಿ ನಿಯೋಜಿಸಲಾಗಿದೆ” ಎಂದು ಭಾರತೀಯ ವಾಯುಪಡೆ ತಿಳಿಸಿದೆ.

ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ನಿರಂತರ ಮಳೆಯು ಹಾನಿಯನ್ನುಂಟುಮಾಡುತ್ತಿದೆ, ಇದರ ಪರಿಣಾಮವಾಗಿ ಕಟ್ಟಡಗಳು ಮತ್ತು ಆಸ್ತಿಗಳಿಗೆ ಹಾನಿಯಾಗಿದೆ. ಮಂಗಳವಾರ ಶಿಮ್ಲಾದ ಕೃಷ್ಣನಗರ ಪ್ರದೇಶದಲ್ಲಿ ಭೂಕುಸಿತದಿಂದ 5ರಿಂದ 7 ಮನೆಗಳು ಕುಸಿದಿವೆ. ಕೆಲವು ನಿವಾಸಿಗಳು ಅವಶೇಷಗಳಲ್ಲಿ ಸಿಲುಕಿದ್ದು, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!