Wednesday, October 5, 2022

Latest Posts

ಕಾಶ್ಮೀರ ಪೋಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಜೈಶ್‌ ಉಗ್ರರು ಹತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಖಚಿತ ಮಾಹಿತಿಯ ಮೇರೆಗೆ ಬುಧವಾರ ರಾತ್ರಿ ಸೋಪೋರ್ ಪಟ್ಟಣದ ಬೊಮೈ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಎನ್‌ ಕೌಂಟರ್‌ ಮೂಲಕ ಉಗ್ರರನ್ನು ಹತ್ಯೆಗೈದಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ನಾಗರಿಕನಿಗೂ ಗಾಯಗಳಾಗಿವೆ ಎಂದು ಪೋಲೀಸರು ಹೇಳಿದ್ದಾರೆ ಎನ್ನಲಾಗಿದೆ.

ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ನೊಂದಿಗೆ ಸಂಬಂಧ ಹೊಂದಿದ್ದು ಇಬ್ಬರೂ ನಾಗರಿಕರ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಮೂಲಗಳ ವರದಿ ಉಲ್ಲೇಖಿಸಿವೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!