ಠೇವಣಿದಾರರ ಸಭೆಯಲ್ಲಿ ಭಾರೀ ಆಕ್ರೋಶ: ಸಿಟ್ಟಿಗೆದ್ದು ಹೊರನಡೆದ ತೇಜಸ್ವಿ ಸೂರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಎಲ್ಲಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸಿದ್ದಾರೆ.

ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಠೇವಣಿದಾರರ ಜೊತೆ ತೇಜಸ್ವಿ ಸೂರ್ಯ ಸಭೆ ನಡೆಸಿದ್ದು, ಸಭೆಯಲ್ಲಿ ಗಲಭೆ ಆಗಿದೆ ಎಂದು ಹೇಳಲಾಗಿದೆ. ಇದರಿಂದ ಸಿಟ್ಟಿಗೆದ್ದ ತೇಜಸ್ವಿ ಸೂರ್ಯ ಸಭೆ ಬಿಟ್ಟು ಹೊರಗೆ ಹೋಗಿದ್ದಾರೆ ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್‌ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ ಎನ್ನಲಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ “ಎಮರ್ಜೆನ್ಸಿ ಎಕ್ಸಿಟ್ ಡೋರ್” ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!