ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಸುವಿನ ಸಗಣಿಯಲ್ಲಿ ಬಚ್ಚಿಟ್ಟ 20 ಲಕ್ಷ ರೂ. ಹಣವನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿರುವ ಘಟನೆ ಒಡಿಶಾದ ಬಾಲಾಸೋರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಹೈದರಾಬಾದ್ ಮತ್ತು ಒಡಿಶಾ ಪೊಲೀಸರ ತಂಡ ಕಮರ್ದಾ ಪೊಲೀಸ್ ಠಾಣೆ ವ್ಯಾಪ್ತಿಯ ಬಡಮಂಡರುಣಿ ಗ್ರಾಮದಲ್ಲಿ ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗೋಪಾಲ್ ಎಂಬಾತ ಹೈದರಾಬಾದ್‌ನ ಕೃಷಿ ಆಧಾರಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಂಪನಿಯ ಲಾಕರ್‌ನಿಂದ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳತನ ಮಾಡಿದ್ದ. ಬಳಿಕ ತನ್ನ ಸೋದರ ಮಾವ ರವೀಂದ್ರ ಬೆಹೆರಾ ಮೂಲಕ ಹಣವನ್ನು ಗ್ರಾಮಕ್ಕೆ ಕಳುಹಿಸಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ದೂರಿನ ಆಧಾರದ ಮೇಲೆ ಹೈದರಾಬಾದ್ ಪೊಲೀಸರ ತಂಡವು ಕಮರ್ದಾ ಪೊಲೀಸರೊಂದಿಗೆ ರವೀಂದ್ರ ಅವರ ಮನೆ ಮೇಲೆ ದಾಳಿ ನಡೆಸಿದಾಗ ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ ಅಪಾರ ಪ್ರಮಾಣದ ಹಣವನ್ನು ಪತ್ತೆ ಮಾಡಿದ್ದಾರೆ.