ಬೆಂಗಳೂರಿನಲ್ಲಿ ರೈತರ ಬೃಹತ್‌ ಪ್ರತಿಭಟನೆ, ಮೈತುಂಬಾ ಸಗಣಿ ಬಳಿದುಕೊಂಡ ಅನ್ನದಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ರೈತರ ಬೃಹತ್‌ ಪ್ರತಿಭಟನೆ ನಡೆಯುತ್ತಿದ್ದು, ಮೈತುಂಬಾ ಸಗಣಿ ಬಳಿದುಕೊಂಡು ಅನ್ನದಾತ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುಡಿಸಲು ನಿವಾಸಿಗಳಿಗೆ ಮನೆ ಭಾಗ್ಯ ಕಲ್ಪಿಸಬೇಕು, ಹಾಲು ಉತ್ಪಾದಕ ರೈತರ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ರೈತರಿಂದು ಬೃಹತ್‌ ಪ್ರತಿಭಟನೆ ನಡೆಸಿದರು.

ನಗರದ ಕನಕಪುರ ರಸ್ತೆಯಿಂದ ಪಾದಯಾತ್ರೆ ಆರಂಭಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ್ದರು. ಪಾದಯಾತ್ರೆಗೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಚಾಲನೆ ನೀಡಿದರು. ಕೆಲ ರೈತರು ಮೈಮೇಲೆ ಸಗಣಿ ಬಳಿದುಕೊಂಡು ಆಕ್ರೋಶ ಹೊರಹಾಕಿದರು. ಆದ್ರೆ ಮಾರ್ಗಮಧ್ಯೆ ರೈತರನ್ನು ತಡೆದ ಪೊಲೀಸರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಸ್ಥಳದಲ್ಲೇ ಇರುವಂತೆ ತಡೆದರು. ಬ್ಯಾರಿಕೇಡ್ ಹಾಕಿ ಸೋಮನಹಳ್ಳಿ ಗೇಟ್ ಬಳಿಯೇ ರೈತರನ್ನು ತಡೆದರು. ಪ್ರತಿಭಟನಾ ಮಾರ್ಗವನ್ನು ಬಂದ್‌ ಮಾಡಿದರು. ಈ ವೇಳೆ ಪೊಲೀಸರು  ರೈತರ ನಡುವೆ ತಳ್ಳಾಟ, ನೂಕಾಟಗಳು ನಡೆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!