ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆ, ಟ್ರಾಫಿಕ್‌ ಜಾಮ್‌ ಭೀತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಜಮಾಯಿಸಿದ್ದಾರೆ. ಭಾರೀ ಪ್ರತಿಭಟನೆಯಿಂದಾಗಿ ದೆಹಲಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಭೀತಿ ಶುರುವಾಗಿದೆ.

ಮಧ್ಯಾಹ್ನ 1 ಗಂಟೆಗೆ ಪ್ರತಿಭಟನೆ ಪ್ರಾರಂಭವಾಗಲಿದೆ. ಶಂಭು ಗಡಿಯಲ್ಲಿ ರೈತರು ಜಮಾಯಿಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು.

ಶಂಭು ಗಡಿಯಲ್ಲಿರುವ ಪ್ರತಿಭಟನಾ ಸ್ಥಳದಿಂದ ದೆಹಲಿಯ ಸಂಸತ್ ಭವನದವರೆಗೆ ಮೆರವಣಿಗೆಯು ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗಲಿದೆ. ರೈತರು ಸಂಯುಕ್ತ ಕಿಸಾನ್ ಮೋರ್ಚಾ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಯಲಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!