ಬಾಂಗ್ಲಾದೇಶದಲ್ಲಿ ಹಿಂದುಗಳ ಬೃಹತ್ ಪ್ರತಿಭಟನೆ: ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ವ್ಯವಹಾರ ಸಚಿವಾಲಯ ತೆರೆಯುವುದು ಸೇರಿದಂತೆ ಪ್ರಮುಖ 8 ಬೇಡಿಕೆಗಳನ್ನು ಮಧ್ಯಂತರ ಸರ್ಕಾರ ಈಡೇರಿಸುವಂತೆ ಒತ್ತಾಯಿಸಿ ಸಹಸ್ರಾರು ಹಿಂದುಗಳು ಬೃಹತ್ ಪ್ರತಿಭಟನೆ ನಡೆಸಿದರು.

ಚಿತ್ತಗಾಂಗ್ ನ ಐತಿಹಾಸಿಕ ಲಾಲ್ಡಿಘಿ ಮೈದಾನದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಬೇಡಿಕೆ ಈಡೇರಿಸದಿದ್ದರೆ ಢಾಕಾಕ್ಕೆ ಮೆರವಣಿಗೆ ನಡೆಸುವುದಾಗಿ ಪ್ರತಿಭಟನಾಕಾಕರು ಎಚ್ಚರಿಕೆ ನೀಡಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

https://x.com/taslimanasreen/status/1850025388614774976?ref_src=twsrc%5Etfw%7Ctwcamp%5Etweetembed%7Ctwterm%5E1850025388614774976%7Ctwgr%5E7d46c22e2ab708296bb76c05414e56bff53dc885%7Ctwcon%5Es1_&ref_url=https%3A%2F%2Fwww.kannadaprabha.com%2Fworld%2F2024%2FOct%2F26%2Fhindus-in-bangladesh-stage-major-rally-in-chittagong-demanding-minority-rights

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು:

* ಅಲ್ಪಸಂಖ್ಯಾತರ ದೌರ್ಜನ್ಯಗಳಲ್ಲಿ ಭಾಗಿಯಾಗಿರುವವರ ವಿಚಾರಣೆಯನ್ನು ತ್ವರಿತಗೊಳಿಸಲು ನ್ಯಾಯಮಂಡಳಿ ರಚನೆ

* ಸಂತ್ರಸ್ತರಿಗೆ ಸೂಕ್ತ ಪರಿಹಾರ ಮತ್ತು ಪುನರ್ವಸತಿ

* ವಿಳಂಬವಿಲ್ಲದೆ ಅಲ್ಪಸಂಖ್ಯಾತರ ರಕ್ಷಣೆಯ ಕಾನೂನು ಜಾರಿಗೊಳಿಸುವುದು

* ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ರಚನೆ

* ಪ್ರತಿ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತರ ಪ್ರಾರ್ಥನಾ ಸ್ಥಳಗಳ ನಿರ್ಮಾಣ

* ಪ್ರತಿ ಹಾಸ್ಟೆಲ್‌ನಲ್ಲಿ ಪ್ರಾರ್ಥನಾ ಕೊಠಡಿಗಳ ಸ್ಥಾಪನೆ

* ಸಂಸ್ಕೃತ ಮತ್ತು ಪಾಲಿ ಶಿಕ್ಷಣ ಮಂಡಳಿಯ ಆಧುನೀಕರಣ.

* ದುರ್ಗಾ ಪೂಜೆಗೆ ಐದು ದಿನ ರಜೆ

ಈ ಪ್ರತಿಭಟನೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಎಚ್ಚರಿಕೆಯನ್ನು ನೀಡಿತು. ಆಗಸ್ಟ್ 5 ರಂದು ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಹಿಂದು ಸಮುದಾಯದ ಅತಿದೊಡ್ಡ ಸಭೆಗಳಲ್ಲಿ ಇದು ಒಂದಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!